ರಾಜ್ಯ ಪ್ರಕಟಣೆ ಜಿಲ್ಲಾ ಪ್ರಕಟಣೆ ಛಾಯಾಚಿತ್ರ ಆಮಂತ್ರಣ ನುಡಿಚಿತ್ರ home Home
State Releases District Releases Photos Invitations Features
ಕನ್ನಡ ಬಿಡುಗಡೆಗಳು
ದಿನಾಂಕ ತಿಂಗಳು ವರ್ಷ
  • Department of Energy
  • ರಾಜ್ಯದಲ್ಲಿ 184 ಟ್ರಾನ್ಸ್ಫಾರ್ಮರ್ ಬ್ಯಾಂಕ್: ಸಚಿವ ಡಿ.ಕೆ.ಶಿವಕುಮಾರ್  
  • Department of Public Works (PWD)
  • ಹೆದ್ದಾರಿ ಪಕ್ಕ ಕಟ್ಟಡ ನಿರ್ಮಿಸುವಾಗ ಷರತ್ತು ಪಾಲನೆ ಕಡ್ಡಾಯ: ಸಚಿವ ಡಾ.ಎಚ್.ಸಿ.ಮಹದೆವಪ್ಪ  

 
Department of Energy21-ನವೆಂಬರ್, 2017 17:37 IST

ರಾಜ್ಯದಲ್ಲಿ 184 ಟ್ರಾನ್ಸ್ಫಾರ್ಮರ್ ಬ್ಯಾಂಕ್: ಸಚಿವ ಡಿ.ಕೆ.ಶಿವಕುಮಾರ್
ಸುವರ್ಣ ವಿಧಾನಸೌಧ ಬೆಳಗಾವಿ(ಕರ್ನಾಟಕ ವಾರ್ತೆ) ನ.21; ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 184 ಟ್ರಾನ್ಸ್ಫಾರ್ಮರ್ ಬ್ಯಾಂಕ್ಗಳನ್ನು ಸ್ಥಾಪಿಸಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನ ಪರಿಷತ್ನಲ್ಲಿಂದು ಅವರು, ರಾಜ್ಯ ರೈತರ ಹಿತದೃಷ್ಟಿಯಿಂದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 184 ಟ್ರಾನ್ಸ್ಫಾರ್ಮರ್ ಬ್ಯಾಂಕ್ಗಳನ್ನು ಸ್ಥಾಪಿಸಲಾಗಿದ್ದು ಅರ್ಜಿ ಸಲ್ಲಿಸಿದ ಮೂರು ದಿನಗಳಲ್ಲಿಯೇ ಟ್ರಾನ್ಸ್ಫಾರ್ಮರ್ ಬದಲಾಯಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಕಾಂತರಾಜು ಅವರ ಪ್ರಶ್ನೆಗೆ ಉತ್ತರಿಸಿದರು. ಅಲ್ಲದೆ, ರಾಜ್ಯದ ವಿದ್ಯುತ್ ಸರಬರಜು ಕಂಪನಿಗಳಲ್ಲಿ 142 ಟ್ರಾನ್ಸ್ಫಾರ್ಮರ್ ದುರಸ್ತಿ ಕೇಂದ್ರಗಳು ಕಾರ್ಯನಿರ್ವಹಿಸುತಿದ್ದು ಈವರೆಗೆ ರಾಜ್ಯದಲ್ಲಿ 2,12,803 ಹೊಸ ಟ್ರಾನ್ಸ್ಫಾರ್ಮರ್ಗಳನ್ನು ಖರೀಸಲಾಗಿದೆ ಎಂದು ಅವರು ತಿಳಿಸಿದರು. ಬೆಸ್ಕಾಂ ವ್ಯಾಪ್ತಿಯ ತುಮಕೂರು ಜಿಲ್ಲೆಯಲ್ಲಿ ಶೀಘ್ರ ಸಂಪರ್ಕ ಯೋಜನೆಯಡಿ ಪ್ರತ್ಯೇಕ ಛತ್ತೀಸ್ಗಢ ವಿದ್ಯುತ್ ಯೋಜನೆ ರದ್ದುಪಡಿಸಿಲ್ಲ: ಸಚಿವ ಡಿ.ಕೆ.ಶಿವಕುಮಾರ್ ಸುವರ್ಣ ವಿಧಾನಸೌಧ ಬೆಳಗಾವಿ(ಕರ್ನಾಟಕ ವಾರ್ತೆ) ನ.21; ಛತ್ತೀಸ್ಗಢ ಶಾಖೋತ್ಮನ್ನ ವಿದ್ಯುತ್ ಯೋಜನೆ ಸೇರಿದಂತೆ ಒಡಂಬಡಿಕೆಯಾಗಿರುವ ಯಾವುದೇ ವಿದ್ಯುತ್ ಯೋಜನೆಗಳನ್ನು ರದ್ದುಪಡಿಸಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ನಲ್ಲಿಂದು ಅವರು, ಛತ್ತೀಸ್ಗಢ ವಿದ್ಯುತ್ ಯೋಜನೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ ಎಂಬುದರಲ್ಲಿ ಯಾವುದೇ ಹುರುಳಿಲ್ಲ. ಛತ್ತೀಸ್ಗಢ ಸೇರಿದಂತೆ ಈವರೆಗೆ ರಾಜ್ಯದಿಂದ ಒಡಂಬಡಿಕೆಯಾಗಿರುವ ಯಾವುದೇ ವಿದ್ಯುತ್ ಯೋಜನೆಗಳನ್ನು ರದ್ದುಪಡಿಸಿಲ್ಲ ಎಂದು ತಿಳಿಸಿದರು. ರಾಜ್ಯದ ಒಳಿತಿಗಾಗಿಯೇ ಹಿಂದಿನ ಸರ್ಕಾರ ಛತ್ತೀಸ್ಗಢದಲ್ಲಿ ಶಾಖೋತ್ಪನ್ನ ವಿದ್ಯುತ್ ಯೋಜನೆಗೆ ಅಲ್ಲಿನ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ಸಂಬಂಧ ಈಗಾಗಲೇ ಸಾಕಷ್ಟು ಬಂಡವಾಳವನ್ನು ಹೂಡಿಕೆ ಮಾಡಲಾಗಿದ್ದು ಆ ಯೋಜನೆಯನ್ನು ರದ್ದು ಪಡಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಅವರು ಹೇಳಿದರು. ಇಂಧನ ಇಲಾಖೆಯಲ್ಲಿರುವ ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಮುಂದಾಗಿದ್ದು ಈಗಾಗಲೇ 23 ಸಾವಿರ ಹುದ್ದೆಗಳನ್ನು ಭರ್ತಿಮಾಡಲಾಗಿದೆ. ಕೊಡಗು ಜಿಲ್ಲೆ ಚಾಮುಂಡೇಶ್ವರಿ ವಿದ್ಯುತ್ ಸರಬರಜು ನಿಗಮ ನಿಯಮಿತ ವ್ಯಾಪ್ತಿಯಲ್ಲಿ 249 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇನ್ನುಳಿದ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅವರು ಸುನೀಲ್ ಸುಬ್ರಮಣಿ ಅವರ ಪ್ರಶ್ನೆಗೆ ಅವರು ಉತ್ತರಿಸಿದರು.
(Release ID 614)