ರಾಜ್ಯ ಪ್ರಕಟಣೆ ಜಿಲ್ಲಾ ಪ್ರಕಟಣೆ ಛಾಯಾಚಿತ್ರ ಆಮಂತ್ರಣ ನುಡಿಚಿತ್ರ home Home
State Releases District Releases Photos Invitations Features
ಕನ್ನಡ ಬಿಡುಗಡೆಗಳು
ದಿನಾಂಕ ತಿಂಗಳು ವರ್ಷ
  • Department of Energy
  • ರಾಜ್ಯದಲ್ಲಿ 184 ಟ್ರಾನ್ಸ್ಫಾರ್ಮರ್ ಬ್ಯಾಂಕ್: ಸಚಿವ ಡಿ.ಕೆ.ಶಿವಕುಮಾರ್  
  • Department of Public Works (PWD)
  • ಹೆದ್ದಾರಿ ಪಕ್ಕ ಕಟ್ಟಡ ನಿರ್ಮಿಸುವಾಗ ಷರತ್ತು ಪಾಲನೆ ಕಡ್ಡಾಯ: ಸಚಿವ ಡಾ.ಎಚ್.ಸಿ.ಮಹದೆವಪ್ಪ  

 
General06-ಸೆಪ್ಟೆಂಬರ್, 2017 17:58 IST

ನಾರಾಯಣ ಗುರುಗಳ ಸಂದೇಶ ಪಾಲನೆಯಿಂದ ಶಾಂತಿ- ಪ್ರಮೋದ್
ಉಡುಪಿ, ಸೆಪ್ಟಂಬರ್ 6 (ಕರ್ನಾಟಕ ವಾರ್ತೆ):- ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶ, ತತ್ವ , ಆದರ್ಶಗಳನ್ನು ದೇಶದ ಎಲ್ಲಾ ರಾಜಕೀಯ ಪಕ್ಷಗಳು ಅನುಷ್ಠಾನಕ್ಕೆ ತಂದರೆ ದೇಶದಲ್ಲಿ ಅಶಾಂತಿ ಇರುವುದಿಲ್ಲ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ. ಅವರು ಬುಧವಾರ ಬನ್ನಂಜೆಯ ನಾರಾಯಣಗುರು ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಡುಪಿ ರವರ ಸಹಯೋಗದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಾರಾಯಣ ಗುರುಗಳ,ಒಂದೇ ಜಾತಿ, ಒಂದೇ ಮತ , ಒಬ್ಬನೇ ದೇವರು ಸಂದೇಶವನ್ನು ಎಲ್ಲಾ ರಾಜಕೀಯ ಪಕ್ಷಗಳು ಅನುಸರಿಸಿದರೆ ಸಮಾಜದಲ್ಲಿ ಅಶಾಂತಿ ಇರಲಾರದು, ದಲಿತರ , ದೌರ್ಜನ್ಯಕ್ಕೆ ಒಳಗಾದವರ ಹಾಗೂ ಹಿಂದುಳಿದವರೂ ಸೇರಿದಂತೆ ಸಮಾಜದ ಎಲ್ಲಾ ವರ್ಗಗಳ ಜನರ ಅಭಿವೃದ್ದಿಗೆ ಶ್ರಮಿಸಿದ ನಾರಾಯಣ ಗುರುಗಳು ದೇಶದ ಸಾಮಾಜಿಕ ಸ್ವಾತಂತ್ರ್ಯಕ್ಕೆ ಮುನ್ನುಡಿ ಬರೆದವರು, ಅವರ ಆದರ್ಶಗಳು ಎಲ್ಲರೂ ಪಾಲನೆ ಮಾಡಬೇಕು ಎಂದು ಸಚಿವರು ತಿಳಿಸಿದರು. ರಾಜ್ಯ ಸರ್ಕಾರ, ನಾರಾಯಣ ಗುರುಗಳು ತತ್ವಗಳ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಶೋಷಣೆಗೆ ಒಳಗಾದವರು ಮತ್ತು ಹಿಂದುಳಿದವರ ಅಭಿವೃದಿಗೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ,ಹಿಂದುಳಿದ ವರ್ಗಗಳ ಇಲಾಖೆಯ ಮೂಲಕ ಎಲ್ಲಾ ಸಮಾಜಗಳ ಸಮುದಾಯ ಭವನಳ ನಿರ್ಮಾಣಕ್ಕೆ , ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಲಾಗುತ್ತಿದೆ, ಉಡುಪಿ ಜಿಲ್ಲೆಯಲ್ಲಿ ಕಡೆಕಾರು, ಮಲ್ಪೆ, ಹಾವಂಜೆ, ಹೊಡೆ, ಅಂಬಲ್ಪಾಡಿ ಸೇರಿದಂತೆ ಹಲವು ಕಡೆಗಳಲ್ಲಿ ನಾರಾಯಣ ಗುರು, ಮೊಗವೀರ, ಕುಡುಬಿ, ಕುಲಾಲ ವಿಶ್ವಕರ್ಮ ಸಮುದಾಯ ಭವನಗಳ ನಿರ್ಮಾಣಕ್ಕೆ ತಲಾ 25 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ. ಮಧುಸೂಧನ ಭಟ್ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿ.ಪಂ. ಸದಸ್ಯೆ ಶಿಲ್ಪಾ ಸುವರ್ಣ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಎಂ ಪಾಟೀಲ್, ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕಾರ್ಯದರ್ಶಿ ಹರಿಶ್ಚಂದ್ರ, ಜನ್ನಂಜೆ ಬಿಲ್ಲವ ಸಂಘದ ಅಧ್ಯಕ್ಷ ಬಿ.ಬಿ. ಪೂಜಾರಿ ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಆಚರಣಾ ಸಮಿತಿ ಅಧ್ಯಕ್ಷ ಜನಾರ್ಧನ ತೋನ್ಸೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಮಹದೇವಯ್ಯ ಸ್ವಾಗತಿಸಿದರು. ಸತೀಶ್ ಶೆಟ್ಟಿ ಚಿತ್ರಪಾಡಿ ನಿರೂಪಿಸಿದರು. ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಏರ್ಪಡಿಸಿದ್ದ ಭಾಷಣ ಸ್ಪರ್ದೇಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸುಂದರ ಜತ್ತನ್ ಮತ್ತು ಬಳಗದವರಿಂದ ಗೀತ ಅಮೃತಧಾರೆ ಕಾರ್ಯಕ್ರಮ ನಡೆಯಿತು
(Release ID 580)