ರಾಜ್ಯ ಪ್ರಕಟಣೆ ಜಿಲ್ಲಾ ಪ್ರಕಟಣೆ ಆಮಂತ್ರಣ ನುಡಿಚಿತ್ರ home Home
State Releases District Releases Invitations Features
ಕನ್ನಡ ಬಿಡುಗಡೆಗಳು
ದಿನಾಂಕ ತಿಂಗಳು ವರ್ಷ
  • General
  • ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ- ಪ್ರಮೋದ್  

 
General24-ನವೆಂಬರ್, 2017 17:02 IST

ಅಭಿವ್ಯಕ್ತಿ ದಮನ ಪ್ರಯತ್ನ ಖಂಡನೀಯ-ಮುಖ್ಯಮಂತ್ರಿ
ಮೈಸೂರು, ನ.24. (ಕರ್ನಾಟಕ ವಾರ್ತೆ):-ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದೇಶ ಭಕ್ತಿ, ಧರ್ಮ ಭಕ್ತಿ, ರಾಷ್ಟ್ರೀಯತೆ ಮೊದಲಾದವುಗಳ ಹೆಸರಲ್ಲಿ ದಮನ ಮಾಡುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಹಿತ್ಯ, ಸಂಗೀತ, ಚಿತ್ರಕಲೆ, ಮಾಧ್ಯಮ ಎಲ್ಲವೂ ಈ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಭಿನ್ನ ಮುಖಗಳು. ಅಭಿಪ್ರಾಯಗಳು ರೂಪುಗೊಳ್ಳುವುದೇ ಮುಕ್ತವಾದ ಅಭಿವ್ಯಕ್ತಿ ಮೂಲಕ. ಪ್ರಜಾಪ್ರಭುತ್ವ ಗಟ್ಟಿಗೊಳ್ಳುವುದೇ ಮುಕ್ತ ಅಭಿವ್ಯಕ್ತಿಯ ಮೂಲಕ ಎಂಬುದು ನನ್ನ ನಂಬಿಕೆ ಎಂದು ತಿಳಿಸಿದರು. ಕನ್ನಡ ಎನ್ನುವುದು ನನಗೆ ರಾಜಕೀಯ ಅಲ್ಲ. ಅದು ನನ್ನ ಬದುಕು. ನಾನು ಹುಟ್ಟು ಕನ್ನಡ ಪ್ರೇಮಿ. ಕನ್ನಡ ಕಾವಲು ಸಮಿತಿ ಅಧ್ಯಕ್ಷನಾಗಿ ಸಾರ್ವತ್ರಿಕ ಜೀವನ ಪ್ರಾರಂಭಿಸಿದ್ದ ನಾನು ಅಲ್ಲಿಂದ ಇಲ್ಲಿಯವರೆಗೆ ನೆಲ-ಜಲ-ನುಡಿಯ ಬಗ್ಗೆ ಎಂದೂ ರಾಜೀಮಾಡಿ ಕೊಂಡಿಲ್ಲ, ಎಂದೂ ರಾಜಕೀಯವನ್ನೂ ಮಾಡಿಲ್ಲ ಎಂದರು. ಭಾಷೆ ಎನ್ನುವುದು ಕೇವಲ ಭಾವನಾತ್ಮಕ ವಿಷಯ ಅಲ್ಲ. ಭಾಷೆಯ ವಿಷಯ ಬಂದಾಗ ನಾವು ಭಾವುಕರಾಗುತ್ತೇವೆ, ಇದು ತಪ್ಪಲ್ಲ, ಆದರೆ, ಅದು ಅಷ್ಟಕ್ಕೆ ನಿಲ್ಲಬಾರದು. ಅದು ಬದುಕು ರೂಪಿಸುವ ಸಮರ್ಥ ಸಾಧನವೂ ಆಗಬೇಕು. ನಮ್ಮದು ಕೇವಲ ಮಾತನಾಡುವ ಸರ್ಕಾರ ಅಲ್ಲ, ಕೆಲಸ ಮಾಡುವ ಸರ್ಕಾರ. ಗುರಿ ಮತ್ತು ದಾರಿ ಎರಡರಲ್ಲಿಯೂ ನಮಗೆ ಸ್ಪಷ್ಟತೆ ಇದೆ ಎಂದರಲ್ಲದೆ, ಭಾಷೆ ಅನ್ನದ ಭಾಷೆಯಾದರೆ ಅದು ಬೆಳೆಯುತ್ತದೆ, ಉಳಿಯುತ್ತದೆ ಎನ್ನುವ ಮಾತಿದೆ. ಆದ್ದರಿಂದ ಕೃಷಿ, ಉದ್ಯಮ, ಉದ್ಯೋಗ, ವಿಜ್ಞಾನ, ತಂತ್ರಜ್ಞಾನ ಹೀಗೆ ಒಟ್ಟು ರಾಜ್ಯದ ಅಭಿವೃದ್ದಿಯಲ್ಲಿಯೇ ಕನ್ನಡದ ಬೆಳವಣಿಗೆ ಕೂಡಾ ಇದೆ ಎಂದು ನಮ್ಮ ಸರ್ಕಾರದ ಆಶಯವಾಗಿದೆ ಎಂದರು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಶೇಕಡಾ ಐದರಷ್ಟು ಮೀಸಲಾತಿ, ಖಾಸಗಿ ಕ್ಷೇತ್ರದ ಉದ್ಯಮಗಳಲ್ಲಿಯೂ ಸಿ ಮತ್ತು ಡಿ ವರ್ಗದ ನೌಕರರ ನೇಮಕಾತಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ, ಸಿಬಿಎಸ್ಇ, ಐಸಿಎಸ್ಇ ಶಾಲೆಗಳೂ ಸೇರಿದಂತೆ ಎಲ್ಲಾ ಇಂಗ್ಲೀಷ್ ಮಾಧ್ಯಮದ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸುವ ಭಾಷಾ ನೀತಿ ಜಾರಿ, ಗ್ರಾಮೀಣ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ನಡೆಸಲು ಕ್ರಮ, ರಾಷ್ಟ್ರೀಕೃತ, ಗ್ರಾಮೀಣ ಮತ್ತು ಷೆಡ್ಯೂಲ್ಡ್ ಬ್ಯಾಂಕ್ಗಳ ಸಿಬ್ಬಂದಿ ಕಡ್ಡಾಯವಾಗಿ ಕನ್ನಡ ಕಲಿಯುವಂತೆ ಸೂಚಿಸಿ ಈಗಾಗಲೇ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ. ಕನ್ನಡೇತರರಿಗೆ ಕನ್ನಡ ಕಲಿಸಲು ಬೆಂಗಳೂರು ನಗರದಲ್ಲಿ ಕನ್ನಡ ಕಲಿಕಾ ಕೇಂದ್ರಗಳ ಪ್ರಾರಂಭಿಸಲಾಗಿದೆ. ಇದು ಸರ್ಕಾರ ಕೈಗೊಂಡಿರುವ ಪ್ರಮುಖ ಕನ್ನಡ ಪರ ನಿರ್ಧಾರಗಳು ಎಂದು ತಿಳಿಸಿದರು. ಸಾಂಸ್ಕøತಿಕ ಕರ್ನಾಟಕವನ್ನು ಇನ್ನಷ್ಟು ಬಲಗೊಳಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಸಾಂಸ್ಕøತಿಕ ನೀತಿಯನ್ನು ಅಂಗೀಕರಿಸಿ ಅನುಷ್ಠಾನಕ್ಕೆ ತರುತ್ತಿದ್ದೇವೆ. ಮೂಲ ಸೌಕರ್ಯ ಕಲ್ಪಿಸಲು ಈ ವರ್ಷ 23 ಕೋಟಿ ರೂಪಾಯಿ ನೀಡಲಾಗಿದೆ. ‘ಧರ್ಮ' ಎಂಬುದು ಸಂಕುಚಿತ ಅರ್ಥಕ್ಕೆ ಸೀಮೀತಗೊಳ್ಳದೆ, `ಧರ್ಮ-ಮಾನವಧರ್ಮ' ಎಂದು ಕನ್ನಡನಾಡಿನ ಪರಂಪರೆಯಾಗಿದೆ. ‘ದಯೆಯೇ ಧರ್ಮದ ಮೂಲವಯ್ಯ ! ದಯೆ ಇಲ್ಲದ ಧರ್ಮ ಯಾವುದಯ್ಯ ? ಎಂದು ಹೇಳಿದ ಬಸವಣ್ಣನವರು ಧರ್ಮದ ಹೆಸರಿನಲ್ಲಿ ಹಿಂಸಾಚಾರಕ್ಕೆ ಪ್ರಚೋದಿಸುವವರಿಗೆ ಉತ್ತರ ನೀಡಿದ್ದಾರೆ. ಇದೀಗ ಧರ್ಮದ ಹೆಸರಿನಲ್ಲಿ ಹಿಂಸಾಚಾರಕ್ಕೆ ಪ್ರಚೋದಿಸುವವರು ಧರ್ಮ ಮತ್ತು ಬಸವ ದ್ರೋಹಿಗಳು ಕುಟುಕಿದ ಮುಖ್ಯಮಂತ್ರಿಗಳು,ಕೋಮು ಸೌಹಾರ್ಧದಂತೆಯೇ, ಭಾಷಾ ಸೌಹಾರ್ಧವೂ ಮುಖ್ಯ ಎಂದು ಒತ್ತಿ ಹೇಳಿದರು. ಮಾತೃ ಭಾಷೆಯ ಶಿಕ್ಷಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಗೆಗೆ ಇರುವ ಕಾನೂನು ತೊಡಕನ್ನು ನಿವಾರಿಸಲು ಸಂವಿಧಾನಕ್ಕೆ ತಿದ್ದುಪಡಿ ತರಬೇಕಾಗಿದೆ. ಕೇಂದ್ರ ಸರ್ಕಾರಕ್ಕೆ ಈ ಸಂಬಂಧವಾಗಿ ಎರಡು ಪತ್ರಗಳನ್ನು ಬರೆದಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿಯೂ ಪ್ರಸ್ತಾಪಿಸಿ ಸಂವಿಧಾನಕ್ಕೆ ತಿದ್ದುಪಡಿ ತರಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು. ಭಾರತದ ಒಕ್ಕೂಟ ತತ್ವವನ್ನು ಒಪ್ಪಿಕೊಂಡು ಕನ್ನಡದ ಅನನ್ಯತೆಯನ್ನು ಎತ್ತಿ ಹಿಡಿಯುವುದು ನಮ್ಮ ಕರ್ತವ್ಯ ಹಾಗೂ ಜವಾಬ್ದಾರಿ. ಆದುದರಿಂದಲೇ ನಮ್ಮ ನಾಡಿಗೆ ಒಂದು ನಾಡಗೀತೆ ಇರುವಂತೆ, ನಾಡಧ್ವಜವೂ ಇರಬೇಕು ಸರಕಾರದ ನಿಲುವಾಗಿದೆ. ನಾಡಗೀತೆ-ರಾಷ್ಟ್ರಗೀತೆ, ನಾಡಧ್ವಜ-ರಾಷ್ಟ್ರಧ್ವಜ ಇವೆರಡೂ ಪರಸ್ಪರ ಪೂರಕ, ಪರಸ್ವರ ವಿರೋಧಿ ಅಲ್ಲ. ಇದನ್ನು ವಿರೋಧಿಸುವುದು ನಾಡು-ನುಡಿಗೆ ತೋರುವ ಅಗೌರವ ಸೂಚಿಸಿದಂತಾಗುತ್ತದೆ ಎಂದರು. ಕನ್ನಡ ಮತ್ತು ಸಂಸ್ಕøತಿ ಪರ ಚಟುವಟಿಕೆಗಳಿಗಾಗಿ ನೀಡುತ್ತಿರುವ ಅನುದಾನವನ್ನು 160 ಕೋಟಿ ರೂ ಗಳಿಂದ 424 ಕೋಟಿ ರೂ ಗಳಿಗೆ ಹೆಚ್ಚಿಸಿದ್ದೇವೆ. ಕನ್ನಡ ಸಾಹಿತ್ಯ ಪರಿಷತ್ ನಿರ್ಮಿಸಲಿರುವ ಶತಮಾನೋತ್ಸವ ಭವನ ನಿರ್ಮಾಣಕ್ಕಾಗಿ ಐದು ಕೋಟಿ ರೂ ವಿಶೇಷ ಅನುದಾನ ನೀಡಿದ್ದೇವೆ. ಅಖಿಲ ಭಾರತ ಸಾಹಿತ್ಯ ಸಮ್ಮೇಳನವೂ ಸೇರಿದಂತೆ ಪರಿಷತ್ನ ಚಟುವಟಿಕೆಗಳಿಗೆ 12 ಕೋಟಿ ರೂ ಅನುದಾನ ನೀಡುತ್ತಿದ್ದೇವೆ ಎಂದು ಅವರು ತಿಳಿಸಿದರು.
(Release ID 619)