ರಾಜ್ಯ ಪ್ರಕಟಣೆ ಜಿಲ್ಲಾ ಪ್ರಕಟಣೆ ಆಮಂತ್ರಣ ನುಡಿಚಿತ್ರ home Home
State Releases District Releases Invitations Features
ಕನ್ನಡ ಬಿಡುಗಡೆಗಳು
ದಿನಾಂಕ ತಿಂಗಳು ವರ್ಷ
  • General
  • ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ- ಪ್ರಮೋದ್  

 
Department of Kannada & Culture 24-ನವೆಂಬರ್, 2017 17:02 IST

83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೆರವಣಿಯಲ್ಲಿ ಸಾಂಸ್ಕøತಿಕ ಸಿಂಚನ
ಮೈಸೂರು.ನ.24(ಕರ್ನಾಟಕ ವಾರ್ತೆ):- 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೈಭವದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಇದೇ ವೇಳೆ ಸಮ್ಮೇಳನ ಅಧ್ಯಕ್ಷರಾದ ಚಂದ್ರಶೇಖರ್ ಪಾಟೀಲ ಅವರು ಅಂಬಾವಿಲಾಸ ಅರಮನೆ ಆವರಣದಲ್ಲಿರುವ ತಾಯಿ ಭುವನೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಮ್ಮಳನ ಅಧ್ಯಕ್ಷರು ಕನ್ನಡ ಭಾವುಟ ಹಾರಿಸುವುದರೊಂದಿಗೆ ಬೆಳ್ಳಿಯ ರಥದಲ್ಲಿ ಪತ್ನಿ ನೀಲಾ ಪಾಟೀಲ್ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿ ಅಧ್ಯಕ್ಷರು ಡಾ.ಮನು ಬಳಿಗಾರ್ ಮೆವಣಿಗೆಯಲ್ಲಿ ಸಾಗಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮೆರವಣಿಗೆ ಚಾಲನೆ ಸಂದರ್ಭದಲ್ಲಿ ಜೊತೆಗಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ನಯೀಮಾ ಸುಲ್ತಾನ ನಜೀರ್ ಅಹಮದ್ ಅವರು ಹಾಗೂ ಮಹಾಪೌರರಾದ ಎಂ.ಜೆ ರವಿಕುಮಾರ್ ಅವರು ಭಾಗಿಯಾಗಿದ್ದರು. ನಂದಿ ಧ್ವಜ, ಕುದುರೆ ಸಾರೋಟು, ಕಂಸಾಳೆ , ಡೊಳ್ಳು ಕುಣಿತ,ವೀರಗಾಸೆ ,ನಾಡಿನ ವಿವಿಧ ಜಾನಪದ ಕಲಾತಂಡಗಳು,ಸ್ತಬ್ಧಚಿತ್ರಗಳು ಮತ್ತು ಸಹಸ್ರಾರು ಸಂಖ್ಯೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ದೇಶಿಯ ಉಡುಗೆಯಲ್ಲಿ ಮೆರವಣಿಗೆಯಲ್ಲಿ ಸಾಗಿದರು. 3 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಮೈಸೂರು ಮೈಸೂರು, ನ.24. (ಕರ್ನಾಟಕ ವಾರ್ತೆ):- ಮಲ್ಲಿಗೆ ನಗರಿ ಮೈಸೂರಿನಲ್ಲಿ ಝೇಂಕರಿಸುತ್ತಿರುವ 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಮಾನ್ಯ ಸಿದ್ದರಾಮಯ್ಯ ಅವರು ಕನ್ನಡದ ಖ್ಯಾತ ಕವಿ ಡಿ.ಎಸ್. ಕರ್ಕಿ ವಿರಚಿತ ಹಚ್ಚೇವು ಕನ್ನಡದ ದೀಪ ಗೀತೆಯ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ಬೆಳಗುವ ಮೂಲಕ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ಸಮ್ಮೇಳನಾಧ್ಯಕ್ಷರಾದ ಪ್ರೊ.ಚಂದ್ರಶೇಖರ ಪಾಟೀಲ, ನೀಲ ಪಾಟೀಲ, ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಮನು ಬಳಿಗಾರ್, ಲೋಕೋಪಯೋಗಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ನಿಕಟ ಪೂರ್ವ ಸಮ್ಮೇಳನ ಅಧ್ಯಕ್ಷರಾದ ಪ್ರೊ.ಬರಗೂರು ರಾಮಚಂದ್ರಪ್ಪ, ನಿತ್ಯೊತ್ಸವ ಕವಿ ಕೆ.ಎಸ್.ನಿಸಾರ್ ಅಹಮದ್, ಗೊ.ರು.ಚನ್ನಬಸಪ್ಪ, ಸಚಿವೆ ಉಮಾಶ್ರಿ, ತನ್ವೀರ್ ಸೇಠ್ ಹಾಗೂ ಇತರ ಪ್ರಮುಖರು ಮುಖ್ಯಮಂತ್ರಿಗಳ ಜೊತೆಗೂಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಜಾನಪದೀಯ ವಾದ್ಯ ಡೊಳ್ಳು ಬಾರಿಸುವ ಮೂಲಕ ನುಡಿಜಾತ್ರೆಯ ಡಿಂಡಿಮ ಬಾರಿಸಿದರು, ಸಮ್ಮೇಳನಾಧ್ಯಕ್ಷರಾದ ಪ್ರೊ.ಚಂದ್ರಶೇಖರ ಪಾಟೀಲ ಅವರು ಡೊಳ್ಳು ಬಾರಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷರಾದ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಸಾಹಿತ್ಯ ಸಮ್ಮೇಳನ ಧ್ವಜವನ್ನು ಚಂದ್ರಶೇಖರ ಪಾಟೀಲ ಅವರಿಗೆ ಹಸ್ತಾಂತರಿಸಿದರು.
(Release ID 620)