ರಾಜ್ಯ ಪ್ರಕಟಣೆ ಜಿಲ್ಲಾ ಪ್ರಕಟಣೆ ಛಾಯಾಚಿತ್ರ ಆಮಂತ್ರಣ ನುಡಿಚಿತ್ರ home Home
State Releases District Releases Photos Invitations Features
ಕನ್ನಡ ಬಿಡುಗಡೆಗಳು
ದಿನಾಂಕ ತಿಂಗಳು ವರ್ಷ
  • General
  • ಔಷಧಿಗೆ ಚೀಟಿ ಬರೆದು ಕೊಡುವ ವೈದ್ಯರ ವಿರುದ್ಧ ಕ್ರಮ: ಸಚಿವ ರಮೇಶ್ ಕುಮಾರ್  

 
Department of Labour05-ಜನವರಿ, 2018 17:35 IST

ಇಂದಿನಿಂದ ತುಮಕೂರು ಬೃಹತ್ ಕೌಶಲ್ಯ-ಉದ್ಯೋಗ ಮೇಳ
ತುಮಕೂರು (ಕವಾ) ಜ.05: ಉದ್ಯೋಗ ಮತ್ತು ತರಬೇತಿ ಇಲಾಖೆ, ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಜನವರಿ 6 ಹಾಗೂ 7ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತುಮಕೂರು ಬೃಹತ್ ಕೌಶಲ್ಯ ಮತ್ತು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ. ಜಯಚಂದ್ರ ಅವರು ಜನವರಿ 6ರಂದು ಬೆಳಿಗ್ಗೆ 11 ಗಂಟೆಗೆ ಉದ್ಯೋಗ ಮೇಳದ ಉದ್ಘಾಟನೆ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಡಾ|| ರಫೀಕ್ ಅಹಮದ್ ವಹಿಸಲಿದ್ದಾರೆ. ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖಾ ಸಚಿವ ಸಂತೋಷ್ ಎಸ್. ಲಾಡ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಮಹಾನಗರ ಪಾಲಿಕೆ ಮಹಾಪೌರ ಹೆಚ್. ರವಿಕುಮಾರ್, ಸಂಸದ ಮುದ್ದ ಹನುಮೇಗೌಡ ಇನ್ನಿತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
(Release ID 645)