ರಾಜ್ಯ ಪ್ರಕಟಣೆ ಜಿಲ್ಲಾ ಪ್ರಕಟಣೆ ಆಮಂತ್ರಣ ನುಡಿಚಿತ್ರ home Home
State Releases District Releases Invitations Features
ಕನ್ನಡ ಬಿಡುಗಡೆಗಳು
ದಿನಾಂಕ ತಿಂಗಳು ವರ್ಷ
  • General
  • ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ- ಪ್ರಮೋದ್  

 
General10-ಜನವರಿ, 2018 17:19 IST

ಅಧಿಕಾರಿಗಳು ಜನಹಿತಕ್ಕಾಗಿ ಕರ್ತವ್ಯ ನಿರ್ವಹಿಸಬೇಕು : ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ
ಧಾರವಾಡ ( ಕರ್ನಾಟಕ ವಾರ್ತೆ) ಜ.10: ಸರಕಾರದ ಅಧಿಕಾರಿಗಳು ತಮ್ಮ ಅಧಿಕಾರ ಜನರ ಹಿತಕ್ಕಾಗಿ ಇದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಬೇಕು ಎಂದು ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ ಶೆಟ್ಟಿ ಅವರು ಹೇಳಿದರು. ಜಿ.ಪಂ.ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ವಿವಿಧ ಇಲಾಖೆಗಳ ಕಾರ್ಯವೈಖರಿ, ಪ್ರಗತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನತೆ, ಮಾಧ್ಯಮ ನಮ್ಮ ಕೆಲಸದ ವೈಖರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ ಎಂಬುದನ್ನು ಯಾವಾಗಲೂ ಮನಸ್ಸಿನಲ್ಲಿಟ್ಟುಕೊಂಡಿರಬೇಕು. ಆಡಳಿತದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಂಡು ಉತ್ತಮ ರೀತಿಯಲ್ಲಿ ಆಡಳಿತ ನಿರ್ವಹಿಸಬೇಕು. ಜನರ ಆಶೋತ್ತರಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಬಗ್ಗೆ ಅಧಿಕಾರಿಗಳು ಆದ್ಯತೆ ನೀಡಬೇಕು. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಇರುವ ತೊಂದರೆ ಹಾಗೂ ಜನರ ಬೇಡಿಕೆಗಳಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ಉತ್ತಮ ವಾತಾವರಣ ರೂಪಿಸಲು ಈ ಸಭೆಗಳು ಸಹಕಾರಿಯಾಗಿವೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ಹೇಳಿದರು. ನಾವು ಮಾಡುವ ಕೆಲಸದ ಮಹತ್ವವನ್ನು ಜನಸಾಮಾನ್ಯರು ಗುರುತಿಸುತ್ತಾರೆ ಮತ್ತು ಆ ಮೂಲಕ ಒಳ್ಳೆಯ ಅಧಿಕಾರಿಯನ್ನು ಗುರುತಿಸಿ, ಗೌರವಿಸುತ್ತಾರೆ. ಸರಕಾರಿ ಸೇವೆಯ ಭಾಗ್ಯ ಎಲ್ಲರಿಗೂ ಸಿಗುವುದಿಲ್ಲ. ಲಭಿಸಿರುವ ಅವಕಾಶವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ಪಾರದರ್ಶಕವಾಗಿ ನಿರ್ವಹಿಸುವ ಮೂಲಕ ಜನಹಿತ ಸಾಧನೆಗಾಗಿ ಶ್ರಮಿಸಬೇಕೆಂದು ಅವರು ಹೇಳಿದರು. ಲೋಕಾಯುಕ್ತ ಪೊಲೀಸ್ ಎಡಿಜಿಪಿ ಸಂಜಯ್ ಸಹಾಯ್ ಮಾತನಾಡಿ, ಲೋಕಾಯುಕ್ತ ಸಂಸ್ಥೆಯು ಭ್ರಷ್ಟಾಚಾರ ನಿಗ್ರಹದ ಜೊತೆಗೆ , ಆಡಳಿತ ಗುಣಮಟ್ಟದ ಸುಧಾರಣೆಗೆ ಒತ್ತು ನೀಡುತ್ತಿದೆ. ಸಾರ್ವಜನಿಕ ಆಡಳಿತದ ಸಾಮಥ್ರ್ಯ ಹೆಚ್ಚಿಸುವುದು. ಉತ್ತಮ ಆಡಳಿತ ನೀಡುವುದು ಎಲ್ಲ ಸಂಸ್ಥೆ, ಕಾಯ್ದೆಗಳ ಉದ್ದೇಶ. ಅಧಿಕಾರಿಗಳು ಪ್ರಸ್ತುತದಲ್ಲಿರುವ ತಂತ್ರಜ್ಞಾನವನ್ನು ತಮ್ಮ ಕರ್ತವ್ಯ ನಿರ್ವಹಣೆಯಲ್ಲೂ ಸಮರ್ಪಕವಾಗಿ ಬಳಸಿಕೊಂಡು ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು. ಕಚೇರಿಯ ಕರ್ತವ್ಯ ನಿರ್ವಹಣೆಯಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಸಾರ್ವಜನಿಕ ಆಡಳಿತದ ವಿಶ್ವಾಸರ್ಹತೆಯನ್ನು ಹೆಚ್ಚಿಸಬೇಕು ಎಂದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಸ್ನೇಹಲ್ ರಾಯಮಾನೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾನಗರ ಪೊಲೀಸ್ ಆಯುಕ್ತ ಎಮ್.ಎನ್. ನಾಗಾರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಿ. ಸಂಗೀತಾ, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಮಹಾನಗರ ಉಪಪೊಲೀಸ್ ಆಯುಕ್ತರಾದ ರೇಣುಕಾ ಕೆ. ಸುಕುಮಾರ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೃಷಿ, ಕೈಗಾರಿಕೆ, ತೋಟಗಾರಿಕೆ, ಸಮಾಜ ಕಲ್ಯಾಣ, ಆಹಾರ ಮತ್ತು ನಾಗರಿಕ ಪೂರೈಕೆ, ಹಿಂದುಳಿದ ಕಲ್ಯಾಣ, ನೀರು ಸರಬರಾಜು, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ಇಲಾಖೆಯ ಪ್ರಗತಿ ವರದಿ ನಿಡಿದರು.
(Release ID 647)